HOME

stories

STORIES

google-news

FOLLOW

FOLLOW

JOIN

ದರ್ಶನ್ ಆಭಿಮಾನಿಗಳಿಗೆ ಗುಡ್ ನ್ಯೂಸ್ : ಡೆವಿಲ್ ಚಿತ್ರ ತಂಡದಿಂದ ಬಿಗ್ ಅಪ್‌ಡೇಟ್

Updated: 12-11-2025, 02.56 PM

Follow us:

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಕೌಂಟ್‌ಡೌನ್ ಶುರು ಮಾಡಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ಸಿನಿಮಾ ಬಿಡುಗಡೆ ಬಹುತೇಕ ಖಚಿತವಾಗಿದೆ. ಡಿಸೆಂಬರ್ 12ಕ್ಕೆ ಆಕ್ಷನ್ ಥ್ರಿಲ್ಲರ್ ‘ಡೆವಿಲ್’ ಸಿನಿಮಾ ತೆರೆಗೆ ತರಲು ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಚಿತ್ರದ ಟೀಸರ್ ಹಾಗೂ 2ಸಾಂಗ್ ಬಂದು ಅಭಿಮಾನಿಗಳ ಮನಗೆದ್ದಿದೆ. ಪ್ರಕಾಶ್ ವೀರ್ ನಿರ್ದೇಶಿಸಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ದರ್ಶನ್ ಜೊತೆ ‘ತಾರಕ್’ ಚಿತ್ರವನ್ನು ಅವರು ತೆರೆಗೆ ತಂದಿದ್ದರು.
‘ಡೆವಿಲ್’ ಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಅವಿನಾಶ್ ಕೂಡ ಚಿತ್ರದ ತಾರಾಗಣದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಹಾಗೂ ಸುಧಾಕರ್ ರಾಜ್ ಛಾಯಾಗ್ರಹಣ ಚಿತ್ರಕ್ಕಿದೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಬಹಳ ಅದ್ಧೂರಿಯಾಗಿ ಚಿತ್ರವನ್ನು ಸ್ವಾಗತಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ಈ ಚಿತ್ರವನ್ನು ಬೆಂಗಳೂರು, ಮೈಸೂರು, ಜೈಪುರ, ದುಬೈ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. 13 ವರ್ಷಗಳ ಹಿಂದೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗಲೇ ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಗೆದ್ದಿತ್ತು. ಅದೇ ಈಗ ರಿಪೀಟ್ ಆಗುತ್ತದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ. ‘ಕಾಟೇರ’ ಸಕ್ಸಸ್ ಬಳಿಕ ಸಹಜವಾಗಿಯೇ ‘ಡೆವಿಲ್’ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ. ದೇಶ ವಿದೇಶಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದೆ.
‘ಡೆವಿಲ್’ ಸಿನಿಮಾ ಬಿಡುಗಡೆಗೆ ಒಂದು ತಿಂಗಳು ಬಾಕಿ ಇರುವಾಗ ಹೊಸ ಸಾಂಗ್ ಬಿಡುಗಡೆ ಚಿತ್ರತಂಡ ಮುಂದಾಗಿದೆ. 3ನೇ ಸಾಂಗ್ ರಿಲೀಸ್ ದಿನಾಂಕ, ಸಮಯ ಘೋಷಣೆ ಮಾಡಿದ್ದಾರೆ. ನವೆಂಬರ್ 16 ಅಂದರೆ ಇದೇ ಭಾನುವಾರ ಮಧ್ಯಾಹ್ನ 12 ಗಂಟೆ 3 ನಿಮಿಷಕ್ಕೆ ಹೊಸ ಸಾಂಗ್ ರಿಲೀಸ್ ಆಗಲಿದೆ. ಇದಕ್ಕೂ ಸಂತು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ.
ನೆಚ್ಚಿನ ನಟನ ಅನುಪಸ್ಥಿತಿಯಲ್ಲಿ ‘ಡೆವಿಲ್’ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾಯುವಂತಾಗಿದೆ. ಶೀಘ್ರದಲ್ಲೇ ‘ಡೆವಿಲ್’ ಟ್ರೈಲರ್ ಲಾಂಚ್ ಕಾರ್ಯಕ್ರಮ ಕೂಡ ನಡೆಯಲಿದೆ. ನಿರ್ಮಾಪಕರು ಹಾಗೂ ತಂಡಕ್ಕೆ ಯಾವುದೇ ಸಮಸ್ಯೆ ಆಗುವುದು ಬೇಡ ಎನ್ನುವ ಕಾರಣಕ್ಕೆ ಜೈಲಿನಲ್ಲಿ ಇದ್ದರೂ ಸಿನಿಮಾ ಬಿಡುಗಡೆ, ಪ್ರಚಾರಕ್ಕೆ ನಟ ದರ್ಶನ್ ಸಲಹೆ ನೀಡಿದ್ದಾರೆ. ಆಪ್ತರ ಮೂಲಕ ಈ ಬಗ್ಗೆ ಸಂದೇಶ ರವಾನಿಸಿದ್ದಾರೆ. ಹಾಗಾಗಿ ಯಾವುದೇ ಸಮಸ್ಯೆ ಇಲ್ಲದೇ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ.

Leave a Comment

About Us

SandalwoodSuddi — ಕನ್ನಡದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಸುದ್ದಿ ವೇದಿಕೆಗಳಲ್ಲಿ ಒಂದಾಗಿದೆ. ನಮ್ಮ ಧ್ಯೇಯ ಸ್ಪಷ್ಟವಾಗಿದೆ: ಕನ್ನಡ ಓದುಗರಿಗೆ ತಾಜಾ, ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ತಲುಪಿಸುವುದು. ಸಿನಿಮಾದಿಂದ ರಾಜಕೀಯ, ಕ್ರೀಡೆ, ತಂತ್ರಜ್ಞಾನ, ಶಿಕ್ಷಣ, ಜೀವನಶೈಲಿ ಮತ್ತು ಮನರಂಜನೆಯವರೆಗೆ — ನಾವು ನಿಮ್ಮ ಮೊಬೈಲ್ ಮತ್ತು ವೆಬ್‌ನಲ್ಲಿ ಎಲ್ಲಾ ಕ್ಷೇತ್ರಗಳ ಇತ್ತೀಚಿನ ನವೀಕರಣಗಳನ್ನು ತಲುಪಿಸುತ್ತೇವೆ.