HOME

stories

STORIES

google-news

FOLLOW

FOLLOW

JOIN

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣ ದ್ರಾಕ್ಷಿ ತಿಂದರೆ, ಏನೆಲ್ಲಾ ಲಾಭಗಳು ಇದೆ ಗೊತ್ತಾ?

Updated: 23-11-2025, 10.00 AM

Follow us:

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ನೀರಿನಲ್ಲಿ ನೆನೆಸಿದ ಒಣ ದ್ರಾಕ್ಷಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಉತ್ತಮ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ದ್ರಾಕ್ಷಿ ತುಂಬಾ ಉಪಯುಕ್ತವಾಗಿದೆ. ಜೊತೆಗೆ ದ್ರಾಕ್ಷಿ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದರಲ್ಲಿ ಕಬ್ಬಿಣಾಂಶ, ನಾರಿನಂಶ, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ತಾಮ್ರದಂತಹ ಹಲವಾರು ಪೋಷಕಾಂಶಗಳಿದ್ದು, ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಣೆಯಾಗಲಿದ್ದು, ನಿಶಕ್ತಿ ಅಂತಹ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ.

ಇದರೊಂದಿಗೆ ಒಣ ದ್ರಾಕ್ಷಿ ಸೇವನೆಯಿಂದ  ನಾನಾ ರೀತಿಯ ಆರೋಗ್ಯ ಪ್ರಯೋಜನಗಳು ಸಿಗಲಿದ್ದು, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ಹಾಗೂ ದೀರ್ಘ ಕಾಲದ ಕಾಯಿಲೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು, ಪ್ರತಿದಿನ ರಾತ್ರಿ ಎಂಟರಿಂದ ಹತ್ತು ದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಹಾಕಿ ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು.

ತೂಕ ಇಳಿಕೆಗೆ ಸಹಕಾರಿ
ತೂಕ ಇಳಿಸಲು ಒಣ ದ್ರಾಕ್ಷಿ ಸಹಕಾರಿಯಾಗಿದ್ದು, ಅದರಲ್ಲೂ ನೀರಿನಲ್ಲಿ ನೆನೆಸಿಟ್ಟ ಒಣ ದ್ರಾಕ್ಷಿ ಪರಿಣಾಮಕಾರಿಯಾಗಿದೆ. ಅಲ್ಲದೇ ಈ ಒಣ ದಾಕ್ಷಿಯಲ್ಲಿ ಹೆಚ್ಚಿನ ಮಟ್ಟದ ಪ್ರೋಟೀನ್ ಇದ್ದು, ಇದರಲ್ಲಿ ಹೆಚ್ಚಿನ ಪ್ರಮಾಣದ ನಾರಿನಾಂಶವಿದೆ. ಇದರಲ್ಲಿ ಇರುವಂತಹ ನಾರಿನಾಂಶವು ಜೀರ್ಣ ಕ್ರಿಯೆಗೆ ಸಹಕಾರಿಯಾಗುವುದು. ಇದರಿಂದ ಕಡಿಮೆ ಕ್ಯಾಲರಿ ತಿಂದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ತುಂಬಾ ಸಹಕಾರಿಯಾಗಲಿದೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಒಣದ್ರಾಕ್ಷಿಯಲ್ಲಿ ಇರುವಂತಹ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸಮವಾಗಿಟ್ಟುಕೊಳ್ಳಲು ಸಹಾಯ ಮಾಡಲಿದ್ದು, ಇದರಲ್ಲಿ ಪೊಟ್ಯಾಸಿಯಮ್ ಕೂಡ ಸಮೃದ್ಧವಾಗಿದೆ. ರಕ್ತದೊತ್ತಡವನ್ನು ನಿಯಂತ್ರಿಸುವುದರಿಂದ ಹಿಡಿದು ದೇಹದಲ್ಲಿನ ವಿವಿಧ ಸಮಸ್ಯೆಗಳ ವಿರುದ್ಧ ಹೋರಾಡುವವರೆಗೆ ಇದು ತುಂಬಾ ಪ್ರಯೋಜನಕಾರಿಯಾಗಿದ್ದು, ಹೃದಯಾಘಾತ, ಪಾರ್ಶ್ವವಾಯು ಮತ್ತು ಅಪಧಮನಿ ಕಾಠಿಣ್ಯದ ಸಮಸ್ಯೆ ನಿವಾರಣೆ ಮಾಡುವುದು.

ಮೂಳೆಗಳ ಆರೋಗ್ಯಕಾರಿ ಬೆಳವಣಿಗೆ
ಮೂಳೆಗಳ ಬೆಳವಣಿಗೆಯನ್ನು ವೃದ್ಧಿಸುವಲ್ಲಿ ಈ ಒಣ ದ್ರಾಕ್ಷಿ ಪ್ರಮುಖ ಪಾತ್ರವಹಿಸಲಿದ್ದು, ಮೂಳೆಗಳ ಶಕ್ತಿ ಹೆಚ್ಚಿಸುತ್ತದೆ. ಮೂಳೆಗಳ ಬೆಳವಣಿಗೆಗೆ ಬೇಕಾಗಿರುವಂತಹ ಬೊರೊನ್ ಎನ್ನುವ ಅಂಶವು ಒಣದ್ರಾಕ್ಷಿಯಲ್ಲಿದ್ದು, ಇದರಲ್ಲಿರುವಂತಹ ಕ್ಯಾಲ್ಸಿಯಂ ಮೂಳೆಗಳನ್ನು ಬಲಗೊಳಿಸುವುದು.

ರಕ್ತಹೀನತೆ ಸಮಸ್ಯೆಗೆ ಪರಿಹಾರ
ದೇಹದಲ್ಲಿ ಕೆಂಪು ರಕ್ತಕಣಗಳ ಪ್ರಮಾಣ ಕಡಿಮೆಯಾದಾಗ ರಕ್ತಹೀನತೆ ಸಮಸ್ಯೆಗಳು ಎದುರಾಗಲಿದ್ದು, ಇದಕ್ಕೆ ಒಣದ್ರಾಕ್ಷಿ ಮದ್ದಾಗಲಿದೆ. ಹೌದು ರಕ್ತಹೀನತೆ ತಪ್ಪಿಸಲು ದೇಹದಲ್ಲಿ ಸಮರ್ಪಕ ಪ್ರಮಾಣದ ಕೆಂಪು ರಕ್ತಕಣಗಳು ಹೆಚ್ಚಾಗಬೇಕು. ಇದಕ್ಕಾಗಿ ಕಬ್ಬಿನಾಂಶ ಅತ್ಯಂತ ಅಗತ್ಯ. ಒಣದ್ರಾಕ್ಷಿಯಲ್ಲಿ ಕಬ್ಬಿನಾಂಶವು ಸಮೃದ್ಧವಾಗಿರುವುದರಿಂದ ಇದು ರಕ್ತಸಂಚಾರವನ್ನು ಸುಧಾರಿಸುತ್ತದೆ ಮತ್ತು ರಕ್ತಹೀನತೆ ಸಮಸ್ಯೆಗೆ ಪರಿಹಾರ ನೀಡುತ್ತದೆ.

Leave a Comment

About Us

SandalwoodSuddi — ಕನ್ನಡದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಸುದ್ದಿ ವೇದಿಕೆಗಳಲ್ಲಿ ಒಂದಾಗಿದೆ. ನಮ್ಮ ಧ್ಯೇಯ ಸ್ಪಷ್ಟವಾಗಿದೆ: ಕನ್ನಡ ಓದುಗರಿಗೆ ತಾಜಾ, ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ತಲುಪಿಸುವುದು. ಸಿನಿಮಾದಿಂದ ರಾಜಕೀಯ, ಕ್ರೀಡೆ, ತಂತ್ರಜ್ಞಾನ, ಶಿಕ್ಷಣ, ಜೀವನಶೈಲಿ ಮತ್ತು ಮನರಂಜನೆಯವರೆಗೆ — ನಾವು ನಿಮ್ಮ ಮೊಬೈಲ್ ಮತ್ತು ವೆಬ್‌ನಲ್ಲಿ ಎಲ್ಲಾ ಕ್ಷೇತ್ರಗಳ ಇತ್ತೀಚಿನ ನವೀಕರಣಗಳನ್ನು ತಲುಪಿಸುತ್ತೇವೆ.