ಚಳಿಗಾಲದಲ್ಲಿ ಸಹಜವಾಗಿಯೇ ವಾತಾವರಣದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುವುದರಿಂದ ದೇಹದ ಉಷ್ಣತೆ ದೇಹದಲ್ಲೇ ಉಳಿಯುತ್ತದೆ. ಅಲ್ಲದೆ ಈ ಕಾಲದಲ್ಲಿ ಒಂದಷ್ಟು ಆರೋಗ್ಯ ಸಮಸ್ಯೆ ಕಾಡುತ್ತದೆ . ಚಳಿಗಾಲದಲ್ಲಿ ಶೀತ, ನೆಗಡಿ, ತಲೆನೋವಿನಂತಹ ಅನೇಕ ಅನಾರೋಗ್ಯ ಸಮಸ್ಯೆಗಳು ಬಾಧಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಹೆಚ್ಚು ಮುಂಜಾಗೃತೆಯಿಂದ ಇರುವುದು ಸೂಕ್ತ.
ಈ ಕಾಲದಲ್ಲಿ ಜೀರ್ಣಶಕ್ತಿ ವೃದ್ಧಿಸಿ ಹಸಿವು ಹೆಚ್ಚಾಗಲಿದ್ದು, ಸಿಹಿ, ಹುಳಿ, ಉಪ್ಪು ಇರುವ ಆಹಾರ ಸೇವಿಸುವುದು ಉತ್ತಮ. ಬಿಸಿಯಾದ ಆಹಾರ ಸೇವನೆ ಅವಶ್ಯಕ. ಹೀಗಾಗಿ ಚಳಿಗಾಲದಲ್ಲಿ ಕೆಲವೊಂದಷ್ಟು ಆಹಾರ ಸೇವನೆ ಮಾಡುವುದರಿಂದ ನಾವು ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬಹುದಾಗಿದ್ದು, ಮುಖ್ಯವಾಗಿ ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಹೀಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳ ಪೈಕಿ ಮೆಂತೆ ಸೊಪ್ಪು ಅಗ್ರ ಸ್ಥಾನದಲ್ಲಿದ್ದು, ದೇಹಕ್ಕೆ ಬೇಕಾದ ಅಗತ್ಯ ಪೌಷ್ಟಿಕಾಂಶಗಳನ್ನು ಇದು ಒದಗಿಸುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಮೆಂತೆ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಪ್ರೊಟೀನ್ ಮತ್ತು ವಿಟಮಿನ್ ಕೆ ಅಂಶಗಳಿಂದಾಗಿ ಕಾಲೋಚಿತ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಮೂಳೆಗಳ ಆರೋಗ್ಯಕ್ಕೆ ಸಹಕಾರಿ
ಇದರಲ್ಲಿ ಸಾಕಷ್ಟು ಕ್ಯಾಲ್ಸಿಯಂ ಮತ್ತು ಪ್ರೊಟೀನ್‌ಗಳಿರುವುದರಿಂದ ನಿಮ್ಮ ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಸಹಾಯ ಮಾಡುತ್ತದೆ. ಈ ಸೊಪ್ಪಿನಲ್ಲಿರುವ ವಿಟಮಿನ್ ಕೆ ಅಂಶವು ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿರುವವರಿಗೂ ಇದು ಪ್ರಯೋಜನಕಾರಿಯಾಗಿದೆ.
ತೂಕ ಇಳಿಕೆಗೆ ಸಹಾಯಕ
ಹೆಚ್ಚಿನ ಜನರು ಚಳಿಗಾಲದಲ್ಲಿ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ತೂಕವನ್ನು ನಿಯಂತ್ರಿಸಲು, ಮೆಂತ್ಯ ಸೊಪ್ಪು ಆಹಾರದಲ್ಲಿ ಸೇರಿಸಿ. ಏಕೆಂದರೆ ಮೆಂತ್ಯದ ಎಲೆಗಳಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ.
ಹೃದಯ ಆರೋಗ್ಯ ಕಾಪಾಡುತ್ತದೆ
ನಿಯಮಿತವಾಗಿ ಮೆಂತ್ಯೆ ಸೊಪ್ಪು ಸೇವನೆ ಮಾಡುತ್ತಲಿದ್ದರೆ ಹೃದಯ ರೋಗಿಗಳಿಗೆ ತುಂಬಾ ಒಳ್ಳೆಯದು. ಇದು ಹೃದಯದ ಹಲವು ಸಮಸ್ಯೆ ನಿವಾರಣೆ ಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಗುಣವೂ ಇದೆ. ಹೃದಯದ ಆರೋಗ್ಯಕ್ಕೆ ತುಂಬಾ ಸಹಕಾರಿ. ಇದು ಹೃದಯಾಘಾತ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದ ಆಗಬಹುದಾದ ಪಾರ್ಶ್ವವಾಯು ತಡೆಯುತ್ತದೆ.
ರಕ್ತ ಹೀನತೆ ಸಮಸ್ಯೆ
ರಕ್ತ ಹೀನತೆ ಸಮಸ್ಯೆ ಇರುವವರು ಮೆಂತೆಯ ಆಹಾರ ಮತ್ತು ಇತರ ತರಕಾರಿಗಳ ಜತೆ ಸಲಾಡ್ ರೂಪದಲ್ಲಿ ಹಸಿ ಮೆಂತೆಯ ಸೊಪ್ಪನ್ನು ಸೇವಿಸಿದರೆ ಹಿಮೋಗ್ಲೋಬಿನ್ ಪ್ರಮಾಣ ಏರಿಕೆ ಆಗುತ್ತದೆ.
ಹಾಗೇ ದೇಹಕ್ಕೆ ಬೇಕಾಗುವ ನಾರಿನಂಶವನ್ನು ಅಧಿಕ ಪ್ರಮಾಣದಲ್ಲಿ ನೀಡುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಪರಿಹಾರಗೊಳಿಸುವುದರ ಜತೆಗೆ ಕರುಳಿನ ಚಲನೆಯನ್ನು ಮೃದುಗೊಳಿಸುತ್ತದೆ.
ಚರ್ಮ ರಕ್ಷಣೆಗೆ ಮೆಂತೆ
ಚಳಿಗಾಲದಲ್ಲಿ ಚರ್ಮ ಉದುರುವ ಸಮಸ್ಯೆ ಸಾಮಾನ್ಯ. ಆಂಟಿ-ಆಕ್ಸಿಡೆಂಟ್‌ಗಳು ಮೆಂತೆ ಎಲೆಗಳಲ್ಲಿ ಹೇರಳವಾಗಿ ಕಂಡುಬರುತ್ತವೆ, ಇದು ಮೊಡವೆಗಳನ್ನು ತೆಗೆದುಹಾಕಲು ಸಹಾಯಕ. ಇದಕ್ಕಾಗಿ ಮೆಂತೆ ಎಲೆಗಳನ್ನು ಪೇಸ್ಟ್ ಮಾಡಿ ಮತ್ತು ಅದನ್ನು ಮುಖಕ್ಕೆ ಅನ್ವಯಿಸಿ. ಇದು ಮುಖದ ಕಲೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಮೆಂತೆ ಸೊಪ್ಪು ಸೇವಿಸುವುದರಿಂದ ಆರೋಗ್ಯಕ್ಕೆ ಸಿಗಲಿದೆ ಹತ್ತಾರು ಪ್ರಯೋಜನ
by

Leave a Comment