---Advertisement---

ಮಂಗಳೂರಿನ ವಂಶಿ ಮುಡಿಗೇರಿದ ಮಹಾನಟಿ ಕಿರೀಟ!

By Chandan Naik

November 9, 2025 11:36 PM

---Advertisement---

ಯುವನಟಿಯರನ್ನು ಕನ್ನಡ ಸಿನಿರಂಗಕ್ಕೆ  ಪರಿಚಯಿಸುವ ವಿಭಿನ್ನ ಕಾರ್ಯಕ್ರಮವೇ ‘ಮಹಾನಟಿ’ (Mahanati Season 2). ಇದೇ ಶನಿವಾರ ಹಾಗೂ ಭಾನುವಾರ (ನವೆಂಬರ್ 8 ಮತ್ತು 9) ಫಿನಾಲೆ ನಡೆದಿದ್ದು ವಿನ್ನರ್‌ ಕೂಡ ಅನೌನ್ಸ್‌ ಆಗಿದೆ. ಮಹಾನಟಿ ಸೀಸನ್-2ರ ವಿಜೇತರಾಗಿ ಮಂಗಳೂರಿನ ವಂಶಿ  ಹೊರಹೊಮ್ಮಿದ್ದಾರೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ ರತ್ನಕುಮಾರ್, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಫೈನಲಿಸ್ಟ್‌ಗಳಾಗಿದ್ದರು.

ಮಂಗಳೂರಿನ ವಂಶಿ ರತ್ನಾಕರ್ ವಿಜಯಶಾಲಿ
ಮಹಾನಟಿ ಸೀಸನ್- ಮಂಗಳೂರಿನ ವಂಶಿ ರತ್ನಾಕರ್ ವಿಜಯಶಾಲಿಯಾಗಿದ್ದಾರೆ. ವೈಟ್‌ಗೋಲ್ಡ್ ವತಿಯಿಂದ 15 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಸಿಕ್ಕಿದೆ. ಮಹಾನಟಿ ಸೀಸನ್-2ರ ಮೊದಲ Runner Up ಬೆಳಗಾವಿಯ ವರ್ಷಾ ಡಿಗ್ರಜೆ ಆಗಿದ್ದಾರೆ. ಅವರಿಗೆ ಜಾರ್ ಆ್ಯಪ್ ವತಿಯಿಂದ 10 ಲಕ್ಷ ರೂ.ಗಳ ನಗದು ಬಹುಮಾನ ಸಿಕ್ಕಿದೆ. ಮಹಾನಟಿ ಸೀಸನ್-2ರ ಎರಡನೇ ರನ್ನರ್‌ ಅಪ್‌ ಮೈಸೂರಿನ ಶ್ರೀಯ ಅಗಮ್ಯ ಅವರಿಗೆ ಸಿಕ್ಕಿದೆ.

ಕಾರ್ಯಕ್ರಮದ ಮುಖ್ಯ ಉದ್ದೇಶ
ಕಿರುತೆರೆಯಿಂದ ಸಿಲ್ವರ್ ಸ್ಕ್ರೀನ್‌ಗೆ ಪ್ರತಿಭಾನ್ವಿತ ನಟಿಯರಿಗೆ ಅವಕಾಶ ಕೊಡಿಸುವುದು ಮಹಾನಟಿ ರಿಯಾಲಿಟಿ ಶೋನ ಮುಖ್ಯ ಉದ್ದೇಶ. ಅಷ್ಟೇ ಅಲ್ಲದೇ ಬೇರೆ ಬೇರೆ ರೌಂಡ್ಸ್‌ಗಳ ಮೂಲಕ ಈ ನಟಿಯರಿಗೆ ಸಿಲ್ವರ್ ಸ್ಕ್ರೀನ್‌ನಲ್ಲಿ ಹೇಗೆ ಕಾಣಿಸಬೇಕು, ಹೇಗೆ ನಟಿಸಬೇಕು ಎನ್ನುವುದಲ್ಲದೆ ಬೆಳ್ಳಿತೆರೆಯ ಇನ್ನಷ್ಟು ವಿಷಯಗಳ ಬಗ್ಗೆ ಟ್ರೈನ್ ಮಾಡಲಾಗಿದ್ದು ಇದು ಈ ನಟಿಯರಿಗೆ ಮುಂದಿನ ದಿನಗಳಲ್ಲಿ ಸಹಾಯ ಆಗಲಿದೆ.

ಶಾರ್ಟ್ ಮೂವಿಗಳಲ್ಲಿ ನಟನೆ
ಮಹಾನಟಿ ಬಿ.ಸರೋಜಾ ದೇವಿ ಅವರ ಸ್ಮರಣಾರ್ಥ ಈ ಕಿರೀಟವನ್ನು ನೀಡಲಾಗುತ್ತಿದ್ದು, ಸರೋಜಮ್ಮನವರು ನಾಡು ಕಂಡ ಅದ್ವಿತೀಯ ಕಲಾವಿದೆ ಎಂದು ಸುಧಾರಾಣಿ ಹಾಡಿ ಹೊಗಳಿದ್ದಾರೆ. ಅಂತಿಮ ಸ್ಪರ್ಧಿಗಳಾಗಿರುವವರು ಇದಾಗಲೇ ನಿರ್ದೇಶಕರುಗಳಾದ ಹರಿ ಸಂತೋಷ್, ಪನ್ನಗ ಭರಣ, ಕವಿರಾಜ್, ಶ್ರೀನಿಧಿ ಬೆಂಗಳೂರು ಹಾಗೂ ಉಮೇಶ್ ಕೆ. ಕೃಪ ನಿರ್ದೇಶಿಸಿರುವ ಶಾರ್ಟ್ ಮೂವಿಗಳಲ್ಲಿ ನಟಿಸಿದ್ದಾರೆ. ಈ ಶಾರ್ಟ್ ಮೂವಿಗಳ ಸ್ಕ್ರೀನಿಂಗ್ ಇದೇ 3ರಂದು ಆಗಿದೆ.

ಮಹಾನಟಿ ಸೀಸನ್ 1 ಅತ್ಯಂತ ಯಶಸ್ವಿ ಆಗಿದ್ದು ಅದರಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಸಿನೆಮಾ ಹಾಗೂ ಕಿರುತೆರೆಯಲ್ಲಿ ಅವಕಾಶಗಳು ಲಭಿಸಿವೆ.

Chandan Naik

ನನ್ನ ಹೆಸರು ಚಂದನ ನಾಯ್ಕ. ನಾನು ಕನ್ನಡ ಡಿಜಿಟಲ್ ಮೀಡಿಯಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಬರಹಗಾರ. ಸಿನಿಮಾ ಸುದ್ದಿ, ಮನರಂಜನೆ, ಆಟೋಮೊಬೈಲ್, ತಂತ್ರಜ್ಞಾನ, ಸರ್ಕಾರಿ ಯೋಜನೆಗಳ ಸುದ್ದಿಯನ್ನು ಸರಳ, ಸ್ಪಷ್ಟ ಹಾಗೂ ನಿಖರವಾಗಿ ಓದುಗರಿಗೆ ತಲುಪಿಸುವುದು ನನ್ನ ಪ್ರಮುಖ ಗುರಿ. ನಾನು ಕನ್ನಡ ಭಾಷೆಯಲ್ಲೇ ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Comments

Leave a Comment