HOME

stories

STORIES

google-news

FOLLOW

FOLLOW

JOIN

Bigg Boss Kannada 12: ವಿನ್ನರ್ ಗೆ ಬಂದಿದೆ 37ಕೋಟಿ ಮತ, ದಾಖಲೆ ಬರೆದ ಆ ಸ್ಪರ್ಧಿ ಯಾರು?

Updated: 17-01-2026, 11.34 PM

Follow us:

Bigg Boss Kannada 12:

Bigg Boss Kannada 12: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಸೀಸನ್‌ ಸದ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಕನ್ನಡ ಬಿಗ್ಬಾಸ್ ಸೀಸನ್ 12 ವಿಜೇತರಾಗುವ ಸ್ಪರ್ಧಿಗೆ ಬರೋಬ್ಬರಿ 37 ಕೋಟಿಗೂ ಅಧಿಕ ಮತಗಳು ಬಂದಿವೆ ಎಂದು ಕಿಚ್ಚ ಸುದೀಪ್‌ ಅವರು ವೇದಿಕೆ ಮೇಲೆ ಬಹಿರಂಗಪಡಿಸಿದ್ದಾರೆ. ವಿನ್ನರ್‌ ಪಡೆದ ಮತಗಳ ಸಂಖ್ಯೆ ನೋಡಿ ಫೈನಲಿಸ್ಟ್‌ಗಳು ಅಚ್ಚರಿಗೊಂಡಿದ್ದಾರೆ.

ಅಂದಹಾಗೆ, ಕಳೆದ ಸೀಸನ್‌ನಲ್ಲಿ ಹನುಮಂತ ಲಮಾಣಿ ಅವರು ವಿನ್ನರ್‌ ಆಗಿದ್ದರು. ಅವರು ದಾಖಲೆಯ 5.23 ಕೋಟಿ ಮತಗಳನ್ನು ಪಡೆದುಕೊಂಡಿದ್ದರು. ಇದು ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಸ್ಪರ್ಧಿಯೊಬ್ಬರು ಪಡೆದ ಅತಿ ಹೆಚ್ಚು ಮತಗಳ ದಾಖಲೆಯಾಗಿದೆ. ರನ್ನರ್ ಅಪ್ ಆಗಿದ್ದ ತ್ರಿವಿಕ್ರಮ್ ಅವರು ಸುಮಾರು 2.53 ಕೋಟಿ ಮತಗಳನ್ನು ಪಡೆದಿದ್ದರು. ಇದೀಗ ಈ ಎಲ್ಲ ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ ಈ ಸ್ಪರ್ಧಿ.

ಗಿಲ್ಲಿ ಕ್ರೇಜ್‌!
ಪ್ರೋಮೋ ಔಟ್‌ ಆದ ಕೂಡಲೇ ಕಮೆಂಟ್‌ನಲ್ಲಿ ಗಿಲ್ಲಿನೇ ವಿನ್ನರ್‌ ಅಂತ ಕಮೆಂಟ್‌ ಮಾಡ್ತಿದ್ದಾರೆ ವೀಕ್ಷಕರು. ಧ್ರುವಂತ್‌ ಅವರು ಮಿಡ್‌ ವೀಕ್ ಅಲ್ಲಿ ಎಲಿಮಿನೇಟ್‌ ಆದಮೇಲೆ ಬಿಗ್‌ ಬಾಸ್‌ ಮನೆಯಲ್ಲಿ ಧನುಷ್‌, ಅಶ್ವಿನಿ ಗೌಡ, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ರಘು ಮತ್ತು ಕಾವ್ಯ ಉಳಿದುಕೊಂಡಿದ್ದಾರೆ. ಇವರೆಲ್ಲರೂ ಫೈನಲಿಸ್ಟ್ ಆಗಿದ್ದು, ಇವರಲ್ಲಿ ಯಾರಿಗೆ ಜಾಸ್ತಿ ವೋಟ್‌ ಬರಲಿದೆಯೋ, ಅವರೇ ಈ ಸೀಸನ್‌ನ ವಿನ್ನರ್.‌ ಈಗಾಗಲೇ ವೋಟಿಂಗ್‌ ಲೈನ್ಸ್‌ ಓಪನ್‌ ಆಗಿದ್ದು, ಬಿಗ್‌ ಬಾಸ್‌ ವೀಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್‌ ಮಾಡುತ್ತಿದ್ದಾರೆ.

ಕಲರ್ಸ್ ಕನ್ನಡ ಬಿಡುಗಡೆ ಮಾಡಿದ ಪ್ರೋಮೊದಲ್ಲಿ ವಾರದ ಪಂಚಾಯಿತಿ ನಡೆಸಲು ಸುದೀಪ್ ಅವರು ಬಿಗ್‌ಬಾಸ್‌ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ವಿನ್ನರ್‌ ಪಡೆದ ದಾಖಲೆಯ ವೋಟಿಂಗ್‌ ಅನ್ನು ರಿವೀಲ್‌ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಮೊದಲ ಮತ್ತು ಎರಡನೇ ಸ್ಥಾನಗಳ ನಡುವೆ ಅತಿ ಕಡಿಮೆ ಮತಗಳ ಅಂತರವಿದೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಕನ್ನಡದ ಬಿಗ್ಬಾಸ್ ಇತಿಹಾಸ ಸೃಷ್ಟಿಸಿದೆ. ಕಳೆದ ವರ್ಷ ವಿನ್ನರ್ಗೆ ಐದು ಕೋಟಿ ವೋಟ್ ಬಂದಿತ್ತು. ಈ ಬಾರಿ ವಿನ್ನರ್‌ ಪಡೆದ ವೋಟ್ 37 ಕೋಟಿಗೂ ಅಧಿಕ ಎಂದು ಸುದೀಪ್ ಹೇಳಿದ್ದಾರೆ. ಇದೀಗ ದಾಖಲೆಯ ವೋಟಿಂಗ್ ಪಡೆದ ಆ ಒಬ್ಬ ಸ್ಪರ್ಧಿ ಯಾರೆಂದು ಭಾನುವಾರದ ಸಂಚಿಕೆಯಲ್ಲಿ ತಿಳಿದು ಬರಲಿದೆ.

ಸದ್ಯ ಕನ್ನಡದ ಬಿಗ್‌ಬಾಸ್‌ 12ನೇ ಆವೃತ್ತಿ ಅಂತಿಮ ಘಟ್ಟಕ್ಕೆ ತಲುಪಿದೆ. ಜ.18 ಭಾನುವಾರ ಈ ಬಾರಿಯ ಬಿಗ್‌ಬಾಸ್‌ ಟ್ರೋಪಿ ಯಾರ ಕೈಗೆ ಸೇರಲಿದೆ ಎಂದು ಗೊತ್ತಾಗಲಿದೆ. ಈಗಾಗಲೇ ಬಿಗ್‌ಬಾಸ್‌ ಮನೆಯಲ್ಲಿ ಟಾಪ್ 6 ಫೈನಲಿಸ್ಟ್‌ಗಳು ಉಳಿದುಕೊಂಡಿದ್ದಾರೆ. ಧನುಷ್ ಗೌಡ, ಕಾವ್ಯ, ರಘು, ಅಶ್ವಿನಿ ಗೌಡ, ಗಿಲ್ಲಿ ನಟ ಹಾಗೂ ರಕ್ಷಿತಾ ಫೈನಲ್‌ ರೇಸ್‌ನಲ್ಲಿದ್ದಾರೆ.

Leave a Comment

About Us

SandalwoodSuddi — ಕನ್ನಡದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಸುದ್ದಿ ವೇದಿಕೆಗಳಲ್ಲಿ ಒಂದಾಗಿದೆ. ನಮ್ಮ ಧ್ಯೇಯ ಸ್ಪಷ್ಟವಾಗಿದೆ: ಕನ್ನಡ ಓದುಗರಿಗೆ ತಾಜಾ, ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ತಲುಪಿಸುವುದು. ಸಿನಿಮಾದಿಂದ ರಾಜಕೀಯ, ಕ್ರೀಡೆ, ತಂತ್ರಜ್ಞಾನ, ಶಿಕ್ಷಣ, ಜೀವನಶೈಲಿ ಮತ್ತು ಮನರಂಜನೆಯವರೆಗೆ — ನಾವು ನಿಮ್ಮ ಮೊಬೈಲ್ ಮತ್ತು ವೆಬ್‌ನಲ್ಲಿ ಎಲ್ಲಾ ಕ್ಷೇತ್ರಗಳ ಇತ್ತೀಚಿನ ನವೀಕರಣಗಳನ್ನು ತಲುಪಿಸುತ್ತೇವೆ.