HOME

stories

STORIES

google-news

FOLLOW

FOLLOW

JOIN

ನಿರ್ದೇಶಕ ಪ್ರಕಾಶ್ ಹೇಳಿದ  ಡೆವಿಲ್ ಚಿತ್ರದ  ಡೈಲಾಗ್ ಗೆ ಅಭಿಮಾನಿಗಳು ಫಿದಾ

Updated: 21-11-2025, 04.59 AM

Follow us:

‘ಡೆವಿಲ್’ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರವಾಗ್ತಿದೆ. ಇತ್ತೀಚೆಗೆ ಚಿತ್ರತಂಡ ಸಭೆ ನಡೆಸಿ ಸಿನಿಮಾ ಪ್ರಮೋಷನ್, ರಿಲೀಸ್ ಬಗ್ಗೆ ಚರ್ಚೆ ನಡೆಸಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಚಿತ್ರತಂಡದ ಬೆಂಬಲಕ್ಕೆ ನಿಂತಿದ್ದಾರೆ. ಡಿಸೆಂಬರ್ 12ಕ್ಕೆ ‘ಡೆವಿಲ್’ ಸಿನಿಮಾ ತೆರೆಗೆ ಬರಲಿದೆ. ಮಿಲನಾ ಪ್ರಕಾಶ್ ನಿರ್ಮಿಸಿ ನಿರ್ದೇಶನ ಮಾಡಿರುವ ಸಿನಿಮಾ ಇದು. ಭಾರೀ ಬಜೆಟ್‌ನಲ್ಲಿ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ. ಈ ಹಿಂದೆ ‘ತಾರಕ್’ ಚಿತ್ರದಲ್ಲಿ ದರ್ಶನ್- ಪ್ರಕಾಶ್ ಒಟ್ಟಿಗೆ ಕೆಲಸ ಮಾಡಿದ್ದರು. ಹಾಗಾಗಿ ಇವರಿಬ್ಬರ ಕಾಂಬಿನೇಷನ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ

ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ‘ಡೆವಿಲ್’ ಚಿತ್ರದ ವಿತರಣೆ ಹಕ್ಕು ಕೊಂಡುಕೊಂಡಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಸಂಪೂರ್ಣವಾಗಿ ರೈಟ್ಸ್ ಕೊಂಡುಕೊಂಡಿಲ್ಲಡಿದ್ದರೂ ಬದಲಿಗೆ ಸಿನಿಮಾ ಬಿಡುಗಡೆಗೆ ಕೆವಿಎನ್ ಸಂಸ್ಥೆ ಬೆಂಬಲವಾಗಿ ನಿಂತಿದೆ ಎನ್ನುವ ಮಾತುಗಳು ಕೇಳಿಬಂದಿದೆ. ಇದನ್ನೆಲ್ಲಾ ಪಕ್ಕಕ್ಕಿಟ್ಟರೆ ಈಗ ‘ಡೆವಿಲ್’ ಚಿತ್ರದ ಡೈಲಾಗ್ ಭಾರಿ ವೈರಲ್  ಆಗಿದೆ. ಚಿತ್ರತಂಡ ಅಭಿಮಾನಿಗಳ ಜೊತೆ ಸಭೆ ನಡೆಸಿತ್ತು. ವಿಜಯಲಕ್ಷ್ಮಿ ದರ್ಶನ್, ದಿನಕರ್ ಹಾಗೂ ನಿರ್ದೇಶಕ ಪ್ರಕಾಶ್ ಈ ವೇಳೆ ಹಾಜರಿದ್ದರು. ಅಭಿಮಾನಿಗಳನ್ನು ಉದ್ದೇಶಿಸಿ ನಿರ್ದೇಶಕ ಪ್ರಕಾಶ್ ಮಾತನಾಡುವ ವೇಳೆ ಚಿತ್ರದ ಒಂದು ಡೈಲಾಗ್ ಹೇಳಿದ್ದಾರೆ. ಅದನ್ನು ಕೇಳಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಂದಹಾಗೆ ಅದು ಚಿತ್ರದಲ್ಲಿ ದರ್ಶನ್ ಹೇಳುವ ಡೈಲಾಗ್ ಅಲ್ಲ. ಬದಲಿಗೆ ದರ್ಶನ್ ಬಗ್ಗೆ ಮತ್ತೊಬ್ಬರು ಹೇಳುವ ಡೈಲಾಗ್.

“ನಮ್ ಬಾಸ್ ಕೊಡೊಕೆ ನಿಂತ್ರೆ ಕರ್ಣನೂ ಕಮ್ಮಿ.. ತೊಡೆ ತಟ್ಟಿದ್ರೆ ಭೀಮನೂ ಡಮ್ಮಿ” ಎಂದು ಪ್ರಕಾಶ್ ಚಿತ್ರದ ಡೈಲಾಗ್ ಹೇಳಿದ್ದಾರೆ. ಅದನ್ನು ಕೇಳಿ ಅಭಿಮಾನಿಗಳು ಸಖತ್ ಎಂಜಾಯ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ‘ಡೆವಿಲ್’ ಚಿತ್ರದ ಕಥೆಯ ಬಗ್ಗೆ ಯಾವುದೇ ಸುಳಿವು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಡಿಸೆಂಬರ್ 1ರಂದು ‘ಡೆವಿಲ್’ ಚಿತ್ರದ ಟ್ರೈಲರ್ ಬಿಡುಗಡೆ ಆಗುತ್ತದೆ ಎನ್ನಲಾಗ್ತಿದೆ. ಆಕ್ಷನ್ ಪ್ಯಾಕ್ಡ್ ಟ್ರೈಲರ್ ಕಟ್ ಮಾಡಿದ್ದು ಅಭಿಮಾನಿಗಳಿಗೆ ಹಬ್ಬದೂಟ ಎನ್ನಲಾಗ್ತಿದೆ. ಅಂದಹಾಗೆ ಈ ಚಿತ್ರಕ್ಕೆ ಕಾಂತರಾಜ್ ಎಸ್ ಎಸ್ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ದರ್ಶನ್ ವಿಭಿನ್ನ ಶೇಡ್‌ಗಳಿರುವ ಪಾತ್ರದಲ್ಲಿ ಮಿಂಚಿದ್ದಾರೆ. ದ್ವಿಪಾತ್ರ ಎಂದು ಕೆಲವರು ಹೇಳುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆಗಿಯೂ ಕೂಡ ದರ್ಶನ್ ಕಾಣಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ರಚನಾ ರೈ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಅಚ್ಯುತ್ ಕುಮಾರ್, ಗಿಲ್ಲಿ ನಟ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಬೆಂಗಳೂರು, ಉದಯ್‌ಪುರ್, ಮೈಸೂರು ಹಾಗೂ ಬ್ಯಾಂಕಾಕ್‌ನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಅಜನೀಶ್ ಲೋಕನಾಥ್ ಸಂಗೀತದಲ್ಲಿ 3 ಹಾಡುಗಳು ಬಿಡುಗಡೆಯಾಗಿದೆ. ಸಂತು ಮಾಸ್ಟರ್ ಎಲ್ಲಾ ಹಾಡುಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ.

‘ಕಾಟೇರ’ ಬಿಡುಗಡೆಗೂ ಮುನ್ನ ‘ಡೆವಿಲ್’ ಸಿನಿಮಾ ಸೆಟ್ಟೇರಿತ್ತು. ಒಂದು ಶೆಡ್ಯೂಲ್ ಶೂಟಿಂಗ್ ಬಳಿಕ ದರ್ಶನ್ ಕೈಗೆ ಪೆಟ್ಟಾಗಿತ್ತು. ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಸ್ವಲ್ಪ ವಿಶ್ರಾಂತಿ ಪಡೆದಿದ್ದರು. ಅದೇ ಸಮಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಕೂಡ ಭಾಗಿ ಆಗಿದ್ದರು. ಬಳಿಕ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲಿ ರೇಣುಕಾಸ್ವಾಮಿ ಪ್ರಕರಣ ಬೆಳಕಿಗೆ ಬಂದಿತ್ತು. ದರ್ಶನ್ ಜೈಲು ಸೇರಿ ಚಿತ್ರೀಕರಣ ನಿಂತಿತ್ತು. ಜಾಮೀನು ಪಡೆದು ಬಿಡುಗಡೆಯಾಗಿ ಬಂದ ಬಳಿಕ ಕೆಲ ದಿನ ವಿಶ್ರಾಂತಿ ಪಡೆದು ಬಳಿಕ ‘ಡೆವಿಲ್’ ಸೆಟ್‌ಗೆ ಎಂಟ್ರಿ ಕೊಟ್ಟಿದ್ದರು. ಶೂಟಿಂಗ್, ಡಬ್ಬಿಂಗ್ ಮುಗಿಸಿದ್ದರು. ಅಷ್ಟರಲ್ಲೇ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ರದ್ದಾಗಿ ದರ್ಶನ್ ಮತ್ತೆ ಜೈಲು ಸೇರುವಂತಾಯಿತು.

Leave a Comment

About Us

SandalwoodSuddi — ಕನ್ನಡದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಸುದ್ದಿ ವೇದಿಕೆಗಳಲ್ಲಿ ಒಂದಾಗಿದೆ. ನಮ್ಮ ಧ್ಯೇಯ ಸ್ಪಷ್ಟವಾಗಿದೆ: ಕನ್ನಡ ಓದುಗರಿಗೆ ತಾಜಾ, ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ತಲುಪಿಸುವುದು. ಸಿನಿಮಾದಿಂದ ರಾಜಕೀಯ, ಕ್ರೀಡೆ, ತಂತ್ರಜ್ಞಾನ, ಶಿಕ್ಷಣ, ಜೀವನಶೈಲಿ ಮತ್ತು ಮನರಂಜನೆಯವರೆಗೆ — ನಾವು ನಿಮ್ಮ ಮೊಬೈಲ್ ಮತ್ತು ವೆಬ್‌ನಲ್ಲಿ ಎಲ್ಲಾ ಕ್ಷೇತ್ರಗಳ ಇತ್ತೀಚಿನ ನವೀಕರಣಗಳನ್ನು ತಲುಪಿಸುತ್ತೇವೆ.